
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕ್ಯಾಂಪ್ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಗಣೇಶಪುರ ಜ್ಯೋತಿ ನಗರ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು, ನಚಿಕೇತ ಎಸ್ ಜನಗೌಡ, ಪಿಐ ಕ್ಯಾಂಪ್ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂದಿಯವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಬಂಧಿತರನ್ನು ನದೀಮ ಅಲ್ಲಾವುದ್ದಿನ್ ನದಾಫ್ (23) ಹಾಗೂ ಮನೀಶ ಮಾರುತಿ ಹುಂದ್ರೆ (23) ಎಂದು ಗುರುತಿಸಲಾಗಿದೆ.
ಆರೋಪಿತರಿಂದ ಒಟ್ಟು ರೂ.35,500/- ಮೌಲ್ಯದ 474 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ