
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಲಗಿದ್ದಾಗ ತಲೆ ಮೇಲೆ ಕಲ್ಲು ಹಾಕಿ ವ್ಯಕ್ತಿಯ ಬರ್ಭರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ತಡರಾತ್ರಿ ನಡೆದಿದೆ.
ವಿಕಾಸ ಜಗಳೂರ (24) ಕೊಲೆಯಾದ ವ್ಯಕ್ತಿ. ಮಹಾರಾಷ್ಟ್ರ ಮೂಲದ ವ್ಯಕ್ತಿ ಕಬ್ಬಿನ ಗ್ಯಾಂಗ್ ನಲ್ಲಿ ಕೆಲಸ ಮಾಡುತ್ತಿದ್ದ. ಕೆಸಲ ಮುಗಿಸಿ ಮಲಗಿದ್ದಾಗ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟಪ್ರಭಾ ಪೊಲೀಸ್ ರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ