
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಜಿಲೆಟಿನ್ ಕಡ್ಡಿಗಳ ಸ್ಫೋಟಕ್ಕೆ ಜನರು ಬೆಚ್ಚಿಬಿದ್ದ ಘಟನೆ ನಡೆದಿದೆ. ಹಿರೇಬಾಗೆವಾಡಿ ಬಳಿಯ ದರ್ಗಾ ಬಳಿಯ ಕ್ರಷರ್ ನಲ್ಲಿ ಈ ಘಟನೆ ನಡೆದಿದೆ.
ಉದಯ್ ಶಿವಕುಮಾರ್ ಎಂಬುವವರ ಕ್ರಷರ್ ಬಳಿ ಇರುವ ಗುಡ್ಡಕ್ಕೆ ಸ್ಥಳೀಯರು ಬೆಂಕಿ ಹಚ್ಚಿದ್ದರು. ಬೆಂಕಿಯ ಕೆನ್ನಾಲಿಗೆ ಕಿಡಿ ಕ್ರಷರ್ ಶೆಡ್ ಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿದ್ದ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಏಕಾಏಕಿ ಸಂಭವಿಸಿದ ಸ್ಫೋಟಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ