Belagavi NewsBelgaum News

*ಸಿಡಿಲು ಬಡಿದು ಬಾಲಕಿ ಸಾವು* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಖನಗಾವ ಬಿಕೆ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಅಕ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.‌ ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯ ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಸಿಡಿಲು ಬಡಿದು ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ್ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಬಾಲಕಿಯ ಅಕಾಲಿಕ ನಿಧನದ ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿರುವ ಸಚಿವರು, ಸರಕಾರದಿಂದ ಸೂಕ್ತ ಪರಿಹಾರ ಒದಗಿಸುವುದಾಗಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button