Karnataka News
*ಬೆಳಗಾವಿಯಲ್ಲಿ ಮತ್ತೋರ್ವ ಯುವತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮುಸ್ಲೀಂ ಯುವಕನ ಕಿರುಕುಳಕ್ಕೆ ಬೇಸತ್ತು ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಶಿಲ್ಪಾ (22) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮೂಲದ ಯುವತಿ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದಳು. ಇದೀಗ ರೂಮಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಶಿಲ್ಪಾ, ಶಿಗ್ಗಾಂವಿಯಲ್ಲಿ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಎಂಬಾತನನ್ನು ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಈ ಮಧ್ಯೆ ಶಿಲ್ಪಾಳಿಗೆ ಮುಸ್ಲಿಂ ವ್ಯಕ್ತಿಯೊಬ್ಬ ಕರೆ ಮಾಡಿ ಟಾರ್ಚರ್ ಕೊಡುತ್ತಿದ್ದ ಎನ್ನಲಾಗಿದೆ. ನವೀನ್ ಕೆಲಸ ಮಾಡುತ್ತಿದ್ದ ಅಂಗಡಿಯ ಮಾಲೀಕ ರಂಜಾನ್ ನದಾಫ್ ಎಂಬಾತ ಶಿಲ್ಪಾಳಿಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಮನನೊಂದ ಯುವತಿ ನೇಣಿಗೆ ಕೊರಳೊಡ್ಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಳೆದ ವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.




