ಮರಾಠಿ ಪುಂಡ ವಿದ್ಯಾರ್ಥಿಗಳ ಬಂಧನಕ್ಕೆ ಆಗ್ರಹ; ಪೊಲೀಸರ ವಿರುದ್ಧವೂ ಕ್ರಮಕ್ಕೆ ಒತ್ತಾಯ; ಕರವೇ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಗರದ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜ್ ಫೆಸ್ಟ್ ನಡೆಯುತ್ತಿರುವ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ನೃತ್ಯ ಮಾಡಿದಕ್ಕೆಮರಾಠಿ ಭಾಷಿಕ ಹುಡುಗರು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಗುರುವಾರ ಕರವೇ ಕಾರ್ಯಕರ್ತರು ಕಾಲೇಜು ಎದುರು ಪ್ರತಿಭಟನೆ ನಡೆಸಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಸಂಜೆ7 ಗಂಟೆ ಸುಮಾರಿಗೆ ಫೆಸ್ಟ್‌ನಲ್ಲಿ ಹಾಡು ಹಚ್ಚಿದ ವೇಳೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕನ್ನಡ ಬಾವುಟ ತೋರಿಸಿದ್ದಾನೆ. ಈ ವೇಳೆ ಆ ವಿದ್ಯಾರ್ಥಿಯ ಸಹಪಾಠಿಗಳು ಬಂದು ಹಲ್ಲೆ ಮಾಡಿದ್ದಾರೆ. ಇದರಿಂದಾಗಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಮರಾಠಿ ಪುಂಡ ವಿದ್ಯಾರ್ಥಿಗಳನ್ನು ಬಂಧಿಸಬೇಕೆಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು.
ಇದೇ ವೇಳೆ ಪೊಲೀಸರ ವಿರುದ್ಧವೂ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡ ಬಾವುಟ ಹಿಡಿದಿದ್ದ ವಿದ್ಯಾರ್ಥಿ ಮೇಲೆ ಟಿಳಕವಾಡಿ ಪೊಲೀಸರು ಹಲ್ಲೆ ನಡೆಸಿದ್ದು, ಪೊಲೀಸರ ವಿರುದ್ಧವೂ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ರಮೇಶ ಯರಗಣ್ಣವರ, ವಿನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕೆಂಗಲ್ ಹನುಮಂತಯ್ಯ ಕರ್ನಾಟಕಕ್ಕೆ ಅಭಿವೃದ್ಧಿಯ ನೀಲನಕ್ಷೆ ಹಾಕಿದವರು: ಸಿಎಂ ಬೊಮ್ಮಾಯಿ
https://pragati.taskdun.com/kengal-hanumanthaiahvidhanasoudhacm-basavaraj-bommi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ