
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ರಾಜೀನಾಮೆಗೆ ಒತ್ತಡಗಳು ಹೆಚ್ಚುತ್ತಿವೆ. ಒಂದೆಡೆ ವಿಪಕ್ಷ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರೆ, ಇನ್ನೊಂದೆಡೆ ಜೆಡಿಎಸ್ ಕಾರ್ಯಕರ್ತರೂ ಪ್ರತಿಭಟನೆ ನಡೆಸಿದ್ದಾರೆ.
ಗೋಕಾಕ್ ನ ಬಸವೇಶ್ವರ ವೃತ್ತದಲ್ಲಿ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಜಲಸಂಪನ್ಮೂಲ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಬಯಲಾಗಿದ್ದು, ಸತ್ಯಾ ಸತ್ಯತೆ ಬಗ್ಗೆ ತನಿಖೆ ನಡೆಯಬೇಕು. ಮೊದಲು ಸಚಿವರು ನೈತಿಕತೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡದಿದ್ದರೆ ಮಾರ್ಜ್ 9ರಂದು ಗೋಕಾಕ್ ಪಟ್ಟಣ ಬಂದ್ ಗೆ ಕರೆ ನೀಡುವುದಾಗಿ ಅಶೋಕ್ ಪೂಜಾರಿ ಎಚ್ಚರಿಸಿದ್ದಾರೆ.
ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಬೆನ್ನಲ್ಲೇ ಮತ್ತೊಂದು ಬಾಂಬ್ ಸಿಡಿಸಿದ ದಿನೇಶ್ ಕಲ್ಲಹಳ್ಳಿ
BIG NEWS: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ; ದೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ