Belagavi NewsBelgaum NewsKannada NewsKarnataka NewsLatestPolitics

*ಅಂಕಲಗಿ-ಪಾಶ್ಚಾಪುರ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ; ಗೋಕಾಕ: ಗೋಕಾಕ, ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಂಕಲಗಿ ಪಾಶ್ಚಾಪುರ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿಯವರು ಪರಿಶೀಲಿಸಿ, ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸೂಚಿಸಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ನಿರ್ಮಿಸಬೇಕು. ರಸ್ತೆ ಕಾಮಗಾರಿಯಲ್ಲಿ ಕಳಪೆ ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಜುಕೇಟಿವ್‌ ಇಂಜಿನಿಯರ್‌ ಎಸ್. ಎನ್.‌ ಬಳೊಲ್‌, ಎಡಬ್ಲೂಇ ಶಿಂಗೆ, ಜೆ.ಇ. ನಾಗಾಭರಣ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳದಲ್ಲಿದ್ದರು.

Home add -Advt

Related Articles

Back to top button