Kannada NewsLatest

ಕಾಂಗ್ರೆಸ್ ಗೆ ಸೇರ್ಪಡೆಯಾದ ಬಿಜೆಪಿ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ; ಗೋಕಾಕ: ಬಿಜೆಪಿಯ ಜನ ವಿರೋಧಿ ನೀತಿ ಮತ್ತು ಆಡಳಿತ ಸರ್ಕಾರದ ತಾರತಮ್ಯ ಧೋರಣೆಯನ್ನು ಧಿಕ್ಕರಿಸಿ ಹುಕ್ಕೇರಿ ತಾಲ್ಲೂಕಿನ ಗೌಡವಾಡ ಗ್ರಾಮದ ನೂರಾರು ಮಹಿಳೆಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಅವರನ್ನು ಭೇಟಿ ಮಾಡಿ, ಪ್ರಸ್ತುತ ಬಿಜೆಪಿ ಪಕ್ಷ ಮತ್ತು ಸರ್ಕಾರದ ವೈಫಲ್ಯ ಹಾಗೂ ಧೋರಣೆಗಳನ್ನು ಬೇಸತ್ತು, ಕಾಂಗ್ರೆಸ್ ಪಕ್ಷವನ್ನು ಸೇರುವ ಇಂಗಿತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಸತೀಶ್ ಜಾರಕಿಹೊಳಿ ಮಾತನಾಡಿ, ಕಾಂಗ್ರೆಸ್ ಪಕ್ಷ ಸಮಾಜದ ಎಲ್ಲ ವರ್ಗದ ಜನರನ್ನು ಒಂದೇ ಸೂರಿನಡಿ ಕರೆದುಕೊಂಡುವ ಹೋಗುವ ಏಕೈಕ ರಾಷ್ಟ್ರೀಯ ಪಕ್ಷವಾಗಿದ್ದು, ತಾವೆಲ್ಲ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರಿಂದ ಪಕ್ಷಕ್ಕೆ ಆನೆ ಬಲ ಬಂದತಾಗಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಪಕ್ಷ ನಿಮ್ಮೊಂದಿಗೆ ಇದ್ದು, ಹತ್ತು ಹಲವು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಲಿದೆ ಎಂದು ಭರವಸೆ ನೀಡಿದರು.

ಚಿನ್ನದ ಹುಡುಗ ನೀರಜ್ ಕೋಚ್ ಕಾಶಿನಾಥ್ ಗೆ 10 ಲಕ್ಷ ಘೋಷಣೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button