Kannada NewsKarnataka NewsLatestPolitics

*ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಅರೆಸ್ಟ್* *ಆತ್ಮಹತ್ಯೆ ಯತ್ನ?*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಚುನಾವಣಾ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ.

ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ 7 ಕೋಟಿ ವಂಚಿಸಿದ್ದಾರೆ ಎಂದು ಸ್ವತಃ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ಚೈತ್ರಾ ಕುಂದಾಪುರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಬೆಳಿಗ್ಗೆ ಉಡುಪಿಯಲ್ಲಿ ಪೊಲಿಸರು ಬಂಧಿಸಿದ್ದಾರೆ.

ಚೈತ್ರಾ ಅವರನ್ನು ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಸಂಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಸಿಸಿಬಿ ಪೊಲೀಸರು ಆರೋಪಿಯನ್ನು ಹಾಜರುಪಡಿಸಲಿದ್ದಾರೆ.

ಬಬಂಧನ ವೇಳೆ ಚೈತ್ರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

Home add -Advt


Related Articles

Back to top button