ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೊರೊನಾ ಚೈನ್ ಕಟ್ ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ಘೋಷಿಸಲಾಗಿದೆ. ಇದೀಗ ಇದೇ ಮಾದರಿಯಲ್ಲಿ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ಕೂಡ ಲಾಕ್ ಡೌನ್ ಘೋಷಿಸಲಾಗಿದೆ.
ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಕೊರೊನಾ ಸೋಂಕು ತಡೆಗಟ್ಟಲು ಗೋಕಾಕ್ ನಲ್ಲಿ 10 ದಿನ ಲಾಕ್‍ಡೌನ್ ಜಾರಿ ಮಾಡಿ ಆದೇಶ ಹೊರಡಿಸಿದರು.
ಸಭೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಗೋಕಾಕ್ ಜನರು ಸ್ವಯಂ ಪ್ರೇರಿತವಾಗಿ ಲಾಕ್‍ಡೌನ್‍ಗೆ ಸಲಹೆ ಕೊಟ್ಟಿದ್ದಾರೆ. ಲಾಕ್‍ಡೌನ್ ವೇಳೆ ಹಾಲು, ತರಕಾರಿ ಅಗತ್ಯ ಸೇವೆ ಪೂರೈಕೆ ಮಾಡುತ್ತೇವೆ. ಜನರು ಯಾರೂ ಮನೆಯಿಂದ ಹೊರಗೆ ಬರಬಾರದು. ಈ ಬಾರಿ ಕೊರೊನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಗೋಕಾಕ್‍ನಲ್ಲಿ ಕಠಿಣ ಲಾಕ್‍ಡೌನ್ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ