Kannada NewsLatest

ರಮೇಶ್ ಜಾರಕಿಹೊಳಿ ರಾಜೀನಾಮೆ; ಬೆಂಬಲಿಗರಿಂದ ಆತ್ಮಹತ್ಯೆಗೆ ಯತ್ನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದ್ದು, ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ.

ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ಗೋಕಾಕ್ ಬಸವ ವೃತ್ತದಲ್ಲಿ ಜಮಾವಣೆಗೊಂಡಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದರೆ. ಅಲ್ಲದೇ ಸರ್ಕಾರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ಮೂವರು ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಮುಂದಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗರನ್ನು ಪೊಲೀಸರು ತಕ್ಷಣ ತಡೆದು ನಿಲ್ಲಿಸಿದ್ದಾರೆ.

Home add -Advt

ಗೋಕಾಕ್ ನಲ್ಲಿ ರಮೇಶ್ ಬೆಂಬಲಿಗರ ಆಕ್ರೋಶ ಮುಗಿಲುಮುಟ್ಟಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ರಮೇಶ್ ಜಾರಕಿಹೊಳಿ ಬೆಂಬಲಿಗರ ಭುಗಿಲೆದ್ದ ಪ್ರತಿಭಟನೆ

BIG NEWS: ರಮೇಶ್ ಜಾರಕಿಹೊಳಿ ರಾಜಿನಾಮೆ

Related Articles

Back to top button