Kannada NewsLatestNational

*ಬಜೆಟ್ ಗೂ ಮುನ್ನ ಬಿಗ್ ಶಾಕ್: ಸಿಲಿಂಡರ್ ದರ ಮತ್ತೆ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಬಜೆಟ್ ಮಂಡನೆಗೂ ಮುನ್ನವೇ ದೇಶದ ಜನತೆಗೆ ಬಿಗ್ ಶಾಕ್ ನೀಡಲಾಗಿದೆ. ದೇಶಾದ್ಯಂತ ವಾಣಿಜ್ಯ ಸಿಲಿಂಡರ್ ದರದಲ್ಲಿ ಹೆಚ್ಚಳವಾಗಿದೆ.

Home add -Advt

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಿವೆ. 19 ಕೆಜಿಯ ವಾಣಿಜ್ಯ ಸಿಲಿಂಡರ್ ದರ 49 ರೂಪಾಯಿ ಏರಿಕೆಯಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ.

ತಿಂಗಳ ಹಿಂದಷ್ಟೇ ಜನವರಿಯಲ್ಲಿ ವಾಣಿಜ್ಯ ಸಿಲಿಂಡರ್ ದರ 111 ರೂಪಾಯಿ ಹೆಚ್ಚಿಸಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಲಾಗಿದೆ. ವಾಣಿಜ್ಯ ಸಿಲಿಂಡರ್ ದರ ಹೆಚ್ಚಳವಾದರೂ ಅಡುಗೆ ಸಿಲಿಂಡರ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. 14.2 ಕೆಜಿಯ ದೇಶಿಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ.


Related Articles

Back to top button