ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಬುಧವಾರ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲ ಕಲ್ಯಾಣ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದರು.
ಮಕ್ಕಳನ್ನು ಪಾಲನೆ ಮಾಡುತ್ತಿರುವ ವಿವೇಕಾನಂದ ಸೇವಾ ಸಂಸ್ಥೆಗೆ ರಾಜ್ಯಪಾಲರು ಭೇಟಿ ನೀಡಿ ಸಂಸ್ಥೆಯಲ್ಲಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದರು.
ಸಂಸ್ಥೆಯು ಮಕ್ಕಳ ಸರ್ವಾಂಗೀಣ ಅಭಿವೃದ್ದಿಗಾಗಿ ಒಂದು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಪುಟ್ಟ ಪುಟ್ಟ ಮಕ್ಕಳ ಪಾಲನೆಗಾಗಿ ಸಂಸ್ಥೆಯ ಕಾಳಜಿ ಶ್ಲಾಘನೀಯ, ಸಮಾಜಮುಖಿ ಕಾರ್ಯ ಮಾಡುತ್ತಿರುವದು ಸಂತಸದ ವಿಷಯ ಹೀಗೆ ಅವರ ಕಾರ್ಯ ಮುಂದುವರೆಯಲಿ ಎಂದು ಹಾರೈಸಿದರು.
ನಂತರ ಮಕ್ಕಳೊಂದಿಗೆ ಸಂವಾದ ನಡೆಸಿದ ಗೌರವಾನ್ವಿತ ರಾಜ್ಯಪಾಲರು ಕೆಲವು ಪ್ರಶ್ನೆಗಳನ್ನು ಕೇಳಿದರು, ಇದಕ್ಕೆ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತ ಪಡಿಸಿದಾಗ, ಮಕ್ಕಳೇ ಉತ್ತಮ ಶಿಕ್ಷಣ ಪಡೆದು, ಸಮಾಜದ ಮುಖ್ಯವಾಹಿನಿಗೆ ಬನ್ನಿ, ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿ ಭಾರತದ ಉತ್ತಮ ಪ್ರಜೆಯಾಗಿ ಎಂದು ಹರಸಿದರು.
ಈ ಸಂದರ್ಭದಲ್ಲಿ ಸಂಸದರಾದ ಮಂಗಳ ಅಂಗಡಿ, ಜಿಲ್ಲಾಧಿಕಾರಿ ಎಂ ಜಿ ಹಿರೇಮಠ, ಸಂಸ್ಥೆಯ ಅಧ್ಯಕ್ಷರಾದ ಮನೀಶ್ ಬಂಡ್ಮಕರ್, ಕಾರ್ಯದರ್ಶಿ ಗಿರೀಶ್ ಇಂನಾಮ್ಧಾರ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
‘ಏಕ ಭಾರತ; ಶ್ರೇಷ್ಠ ಭಾರತ’ ನಿರ್ಮಿಸೋಣ: ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಕರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ