Kannada NewsLatest

ಬೆಳಗಾವಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶ್ರೀಮಂತ ಸಾಂಸ್ಕೃತಿಕ ನಗರ ಬೆಳಗಾವಿಗೆ ಮೂರು ದಿನಗಳಕಾಲ ಪ್ರವಾಸ ಕೈಗೊಂಡಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಇಂದು ಸ್ವಾಗತಿಸಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ ಹಿರೇಮಠ ಅವರು ಹೂಗುಚ್ಚ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಮ್ ನಸಲಾಪುರೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕರಿಸಿದ್ದಪ್ಪ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ರಾಮಚಂದ್ರೇಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಭಾರತೀಯ ಸೇನೆಯಲ್ಲಿ ಸಿಗದ ಅವಕಾಶ; ಉಕ್ರೇನ್ ಆರ್ಮಿ ಸೇರಿದ ತಮಿಳುನಾಡು ವಿದ್ಯಾರ್ಥಿ

Home add -Advt

Related Articles

Back to top button