ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಅನುಕೂಲವೂ ಆಗಿದೆ ಅನಾನುಕೂಲವೂ ಆಗಿದೆ. ಮಳೆಹಾನಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ನಾವು ಎಲ್ಲಾ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿದ್ದೇವೆ. ಸಿಎಂ ಬೊಮ್ಮಾಯಿ ಪರಿಹಾರ ನೀಡುವ ಕೆಲಸ ಮಾಡಿದ್ದಾರೆ. ಹೆಕ್ಟೇರ್ ಗೆ ಎನ್ ಡಿ ಆರ್ ಎಫ್ ಗೈಡ್ ಲೈನ್ ಗಿಂತ ಶೇ.10ರಷ್ಟು ಹೆಚ್ಚಿನ ಪರಿಹಾರ ನೀಡಲಾಗಿದೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಅನುಕೂಲ, ಅನಾನೂಕೂಲ ಎರಡೂ ಆಗಿದೆ. ಮಳೆಯಿಂದಾಗಿ ಶೇ.10ರಷ್ಟು ಜನರಿಗೆ ತೊಂದರೆಯಾಗಿರಬಹುದು. ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಧಿಕಾರಿಗೆ ತಿಳಿಸಲಾಗಿದೆ. ಸಿಎಂ ಈಗಾಗಲೇ ತುರ್ತು ಪರಿಹಾರ ಕೊಡುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಅಧಿಕಾರಿಗಳಿಗೂ ಮುಂಜಾಗೃತಾ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಹೇಳಿದರು.
ಕ್ರೂಸರ್ ಅಪಘಾತ ಪ್ರಕರಣ; 9ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ