Kannada NewsLatest

*ಗ್ರಾಮ ಪಂಚಾಯತ ಉಪ-ಚುನಾವಣೆ: ಮದ್ಯ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯತ ಉಪ-ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ.

ಫೆ.23 ರ ಸಂಜೆ 5 ಗಂಟೆಯಿಂದ ಫೆ.25 ರ ಮಧ್ಯರಾತ್ರಿ 12 ಗಂಟೆಯವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವ ಗ್ರಾಮ ಪಂಚಾಯತ ಪ್ರದೇಶಗಳಾದ ರಾಮದುರ್ಗ ತಾಲೂಕಿನ ನರಸಾಪೂರ, ಬೆಳಗಾವಿ ತಾಲೂಕಿನ ಬೆಳಗುಂದಿ ಹಾಗೂ ಹೀರೇಬಾಗೇವಾಡಿ, ಖಾನಾಪೂರ ತಾಲೂಕಿನ ಗಂದಿಗವಾಡ, ಕಾಗವಾಡ ತಾಲೂಕಿನ ಉಗಾರ ಬುದ್ರುಕ, ಹಾಗೂ ಗೋಕಾಕ ತಾಲೂಕಿನ ನಲ್ಲಾನಟ್ಟಿ ಗ್ರಾ.ಪಂ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟವನ್ನು ವಿಷೇಧಿಸಿ ಮದ್ಯ/ಬಾರ್ ಅಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ನಿತೇಶ್.ಕೆ.ಪಾಟೀಲ್ ಆದೇಶ ಹೊರಡಿಸಿದ್ದಾರೆ.

Home add -Advt

*ಬೆಳಗಾವಿ: ವಿವಿಧ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ*

https://pragati.taskdun.com/belagavitalukslokayukta-officersvisit/

Related Articles

Back to top button