
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ” ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ” ಗೃಹ ಜ್ಯೋತಿ” ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವು ಆಗಸ್ಟ್.5 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯಲಿದೆ.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ವಹಿಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ವಿಧಾನಸಭೆ ಶಾಸಕರಾದ ಆಸಿಫ್ ಸೆಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ ಬಿ. ಶೆಟ್ಟೆಣ್ಣವರ, ಆರಕ್ಷಕ ಮಹಾನಿರಿಕ್ಷಕರಾದ ವಿಕಾಸ ಕುಮಾರ ವಿಕಾಸ, ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತರಾದ ಎಸ್. ಏನ್ ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಸಂಜೀವ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೋಯರ್, ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಆಗಮಿಸಲಿದ್ದಾರೆ.
ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಕ. ವಿ.ನಿ. ನಿ ಹಾಗೂ ಕ. ವಿ. ಪ್ರ. ನಿ. ನಿ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ರೋಷನ್, ಹೆಸ್ಕಾಂ ನಿರ್ದೇಶಕರಾದ ಶ್ರೀಕಾಂತ್ ಎಂ ಸಸಾಲಟ್ಟಿ, ಪಾಟೀಲ್ ಪ್ರಕಾಶ, ಮುಖ್ಯ ಇಂಜಿನಿಯರ ವಿ. ಪ್ರಕಾಶ್, ಅಧೀಕ್ಷಕ ಇಂಜಿನಿಯರ ಪ್ರವೀಣಕುಮಾರ್ ಚಿಕಡೆ ಹಾಗೂ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ