Kannada NewsLatest

ಜ್ಯೋತಿಬಾ ಪಲ್ಲಕ್ಕಿ ಮೆರವಣಿಗೆ ಹಾಗೂ ಸಾಮೂಹಿಕ ಗುಗ್ಗುಳೋತ್ಸವ: ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಯಕ್ಸಂಬಾ ಪಟ್ಟಣದಲ್ಲಿ ನಡೆದ 10ನೇ ಪ್ರೇರಣಾ ಉತ್ಸವದ ಅಂಗವಾಗಿ ಸಾಮೂಹಿಕ ಗುಗ್ಗುಳೋತ್ಸವಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಚಾಲನೆ ನೀಡಿದರು.

ಯಕ್ಸಂಬಾ ಪಟ್ಟಣದಲ್ಲಿ ನಡೆದ 10ನೇ ಪ್ರೇರಣಾ ಉತ್ಸವದ ಅಂಗವಾಗಿ, ವಿವಿಧ ಜನಪದ ಕಲಾ ತಂಡಗಳೊಂದಿಗೆ ಪಟ್ಟಣದ ಮಹಾದೇವ ಮಂದಿರದಿಂದ ಶ್ರೀ ಜ್ಯೋತಿಬಾ ಮಂದಿರದವರೆಗೆ ನಡೆದ ಭಕ್ತಿ ಸಮರ್ಪಣೆಯ 70 ಜೋಡಿಗಳ ಸಾಮೂಹಿಕ ಗುಗ್ಗುಳೋತ್ಸವಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ ಸಚಿವರಾದ ಶಶಿಕಲಾ ಜೊಲ್ಲೆ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಜ್ಯೋತಿಪ್ರಸಾದ ಮತ್ತು ಬಸವಪ್ರಸಾದ ಚಾಲನೆ ನೀಡಿ, ಮೆರವಣಿಗೆಯಲ್ಲಿ ಭಾಗವಹಿಸಿದರು.

Related Articles

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ನಾಡಿನ ಒಳಿತಿಗಾಗಿ ಈ ಪುಣ್ಯಕಾರ್ಯವನ್ನು ಹಮ್ಮಿಕೊಂಡಿದ್ದು, ಸರ್ವರಿಗೂ ಶ್ರೀ ದೇವರು ಸುಖ, ಸಂತೋಷ, ಸಮೃದ್ಧಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಶ್ರೀ ಬೀರೇಶ್ವರ ಸಂಸ್ಥೆಯ ಅಧ್ಯಕ್ಷರಾದ ಜಯಾನಂದ ಜಾಧವ, ನಿರ್ದೇಶಕರಾದ ಅಪ್ಪಾಸಾಹೇಬ ಜೊಲ್ಲೆ, ಕಲ್ಲಪ್ಪ ಜಾಧವ, ಜೋತಿ ಸಂಸ್ಥೆಯ ಅಧ್ಯಕ್ಷರಾದ ಚಂದ್ರಕಾಂತ ಖೋತ, ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಚಂದ್ರಕಾಂತ ಕೋಟಿವಾಲೆ, ನೂರಾರು ಭಕ್ತರು, ಉಪಸ್ಥಿತರಿದ್ದರು.

Home add -Advt

Related Articles

Back to top button