Karnataka NewsLatestPolitics

*ಡಿ.ಕೆ.ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ನೀಡಿದ ಅಜ್ಜಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ಹೊಸ ಸರ್ಕಾರ ರಚನೆ ಹಿನ್ನೆಲೆಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ರಾಜ್ಯಪಾಲರ ಭೇಟಿ ಬಳಿಕ ಡಿ.ಕೆ.ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದಾರೆ.

ಬೆಂಗಳೂರಿನ ನಾಗರಬಾವಿಗೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರು ಅಲ್ಲಿನ ನೊಣವಿನಕೆರೆ ಅಜ್ಜಯ್ಯನ ಶಾಖಾ ಮಠಕ್ಕೆ ತೆರಳಿದ್ದಾರೆ. ಅಲ್ಲಿ ಅಜ್ಜಯ್ಯನ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಪ್ರಮಾಣವಚನಕ್ಕೆ ಡಿ.ಕೆ.ಶಿವಕುಮಾರ್ ದಿನಾಂಕವನ್ನು ಕೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಪ್ರಮಾಣವಚನಕ್ಕೆ ಜೂನ್ 3ರ ಬುಧವಾರ ಮುಹೂರ್ತವನ್ನು ಅಜ್ಜಯ್ಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಡಿ.ಕೆ.ಶಿವಕುಮಾರ್ ಜಾತಕದ ಪ್ರಕಾರ ಜೂನ್ 3ರಂದು ಶುಭದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಅಂದೇ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮೇಲೆ ಪ್ರಮಾಣವ್ಚನ ಸ್ವೀಕಾರಕ್ಕೆ ಸಿದ್ಧತೆ ಕೂಡ ಆರಂಭವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button