Kannada NewsKarnataka NewsLatest

ಹಲಗಾ -ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಗೆ ರೈತರ ವಿರೋಧ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಲಗಾ -ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕಾಮಗಾರಿ ಪರಿಶೀಲನೆಗೆ ಬಂದ ಡಿ.ಸಿ.ಹಿರೇಮಠ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ರೈತ ಮಹಿಳೆಯರು ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ. ರಸ್ತೆ ಕಾಮಗಾರಿಗಳನ್ನು ನಿಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ. ಗೀತಾ ಎಂಬ ಮಹಿಳೆ ಕುಡುಗೋಲು ಕೈಲಿ ಹಿಡಿದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ ಕೆಲಕಾಲ ಡಿ.ಸಿ ಹಾಗೂ ಪೊಲೀಸ್ ಅಧಿಕಾರಿಗಳೇ ಕಂಗಾಲಾದ ಘಟನೆ ನಡೆಯಿತು.

Home add -Advt

ಈ ಹಿನ್ನೆಲೆಯಲ್ಲಿ ಡಿ.ಸಿ.ಹಿರೇಮಠ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದ್ದು, ರೈತರ ಮನವೊಲಿಸುವ ಯತ್ನ ನಡೆಸಿದ್ದಾರೆ.

ಈ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರೋಡ್ ಖಚಿತ – ಅಭಯ ಪಾಟೀಲ

Related Articles

Back to top button