
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನಸಭಾ ಚುನಾವಣೆಗೆ ಕೇವಲ 6 ದಿನ ಮಾತ್ರ ಬಾಕಿಯಿದ್ದು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವುದಾಗಿ ಘೋಷಿಸಿರುವುದು ರಾಜ್ಯಾದ್ಯಂತ ಹಿಂದೂ ಪರ ಸಂಘಟನೆ, ಬಿಜೆಪಿ ಕಾರ್ಯಕರ್ತರ ಕೆಂಗಣ್ಣಿಗೆ ಕಾರಣವಾಗಿದೆ. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳು ಹನುಮಾನ್ ಚಾಲೀಸಾ ಪಠಣಕ್ಕೆ ಮುಂದಾಗಿವೆ.
ಇಂದು ಸಂಜೆ 7 ಗಂಟೆಗೆ ಹನುಮ ಮಂದಿರಗಳಲ್ಲಿ ಹಾಗೂ ದೇವಾಲಯಗಳಲ್ಲಿ ಹನುಮಾನ್ ಚಾಲೀಸ ಪಠಿಸುವಂತೆ ವಿಶ್ವ ಹಿಂದೂಪರಿಷತ್, ಬಜರಂಗದಳ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಹನುಮಾನ್ ಮಂದಿರಗಲಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಬೆಳಗಾವಿ ಹನುಮಾನ್ ಮಂದಿರದಲ್ಲಿ ಬಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರರು ಹನುಮಾನ್ ಚಾಲೀಸ ಪಠಣಾ ಮಡುವ ಮೂಲಕ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.