Belagavi NewsBelgaum NewsKannada NewsKarnataka News
*BREAKING: ಬೆಳಗಾವಿಯಲ್ಲಿ ಘೋರ ದುರಂತ: ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದ ಗೂಡ್ಸ್ ವಾಹನ ಚಾಲಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಹೃದಯಾಘಾತದಿಂದ ಸಾವಿನ ಸರಣಿ ರಾಜ್ಯದಲ್ಲಿ ಮುಂದುವರೆದಿದೆ. ಇದೀಗ ಬೆಳಗಾವಿ ಜಿಲ್ಲೆಗೂ ಕಾಲಿಟ್ಟಿದೆ. ಎಪಿಎಂಸಿಗೆ ಬಂದಿದ್ದ ಗೂಡ್ಸ್ ವಾಹನ ಚಾಲಕರೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಸವದತ್ತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಈ ದುರಂತ ಸಂಭವಿಸಿದೆ. ಅಶೋಕ್ ಜೀರಿಗವಾಡ (48) ಮೃತ ದುರ್ದೈವಿ. ಮೃತ ಅಶೋಕ್ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿ.
ಇಂದು ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ಹೆಸರು ಕಾಳು ತಂದಿದ್ದರು. ಈ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಎದೆನೋವಿನಿಂದ ಕುಸಿದು ಬಿದ್ದವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.