*ಬೆಳಗಾವಿಯಲ್ಲಿ ಘೋರ ದುರಂತ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ನಿನ್ನೆಯಷ್ಟೇ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇಂದು ಮತ್ತೊಂದು ಅವಘಡ ಸಂಭವಿಸಿದೆ. ನೀರಿನ ರಭಸಕ್ಕೆ ಹಳ್ಳದ ನೀರಿನಲ್ಲಿ ಆಟೋ ಚಾಲಕನೊಬ್ಬ ಕೊಚ್ಚಿ ಹೋಗಿದ್ದಾನೆ. ಯರಗಟ್ಟಿ ತಾಲೂಕಿನ ಚಿಕ್ಕಬೂದೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಚಾಲಕ ಆಟೋ ಸಮೇತ ಕೊಚ್ಚಿ ಹೋಗಿ ನೀರುಪಾಲಾಗಿದ್ದಾನೆ. ಘಟನಾ ಸ್ಥಳಕ್ಕೆ ಗ್ರಾಮಸ್ಥರು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, … Continue reading *ಬೆಳಗಾವಿಯಲ್ಲಿ ಘೋರ ದುರಂತ: ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕ*