Latest

ನದಿಯಂತಾದ ರಾಷ್ಟ್ರೀಯ ಹೆದ್ದಾರಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ರಸ್ತೆಗಳು ನದಿಗಳಂತಾಗಿದ್ದು, ರಾಷ್ಟ್ರೀಯ ಹೆದ್ದಾರಿ 4 ಸಂಪೂರ್ಣ ಜಲಾವೃತಗೊಂಡಿದೆ.

ಬೆಳಗಾವಿಯಲ್ಲಿ 16ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿದ್ದು, ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂದಿದೆ. ಜನಜೀವನ ಅಸ್ತವ್ಯಸ್ಥಗೊಂಡಿದೆ. ಇನ್ನೊಂದೆಡೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೀರು ತುಂಬಿ ಹರಿಯುತ್ತಿರುವ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಕಾಕತಿಯಿಂದ ಭೂತರಾಮನಟ್ಟಿ ವರೆಗೆ ಬಹುತೇಕ ರಸ್ತೆಯಲ್ಲಿ ನೀರು ಆವರಿಸಿದೆ. ವಾಹನ ಸಂಚಾರ ಅಸ್ತವ್ಯವ್ಯಸ್ತವಾಗಿದೆ. 2 -3 ಕಾರುಗಳು ಸಿಲುಕಿಕೊಂಡಿವೆ.
ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ; ಬೆಳಗಾವಿಯಲ್ಲಿ ಹೈ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button