
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರು ಕಾರಾಗೃಹವನ್ನು ಸ್ಫೋಟಿಸುವುದಾಗಿ ಬಂಧಿ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ತಿಳಿದುಬಂದಿದೆ.
ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಫೋಟಿಸುವುದಾಗಿ ಹಾಗೂ ವಸತಿ ಗೃಹಗಳ ಮೇಲೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಬಂಧಿ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಿಂದಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸುವುದಾಗಿ ಹಾಗೂ ಸ್ವತಃ ತಮ್ಮ ಮೇಲೆಯೂ ಹಲ್ಲೆ ನಡೆಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.