Belagavi NewsBelgaum NewsKannada NewsKarnataka NewsLatest
*ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿಸಿಪಿಗೆ ಬೆಳಗಾವಿಯ 5 ವಿಭಾಗದ ಎಸಿಪಿ, ಸಿಪಿಐ ಸಾಥ್ ನೀಡಿದ್ದಾರೆ. ಹಿಂಡಲಗಾ ಜೈಲಿನಲ್ಲಿ ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಜೈಲಿನಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಬೆಳಿಗ್ಗೆಯಿಂದ ಜೈಲಿನ ಒಳಗಡೆ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ