
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಲ್ಯಾಪ್ ವಿತರಣೆಗೆ ಆಗ್ರಹಿಸಿ ಆರ್ ಸಿಯು ವಿದ್ಯಾರ್ಥಿಗಳು ಸಿಎಂ ಬಸವರಾಜ್ ಬೊಮ್ಮಾಯಿ ಕಾರನ್ನು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಹಿರೇಬಾಗೇವಾಡಿಯಲ್ಲಿ ನಡೆದಿದೆ.
ಇಲ್ಲಿನ ಮಲ್ಲಪ್ಪನಗುಡ್ಡದಲ್ಲಿ ಆರ್ ಸಿಯು ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿ ಪೂಜೆಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದವರಾದ, ನಾಲ್ಕನೇ ಸೆಮಿಸ್ಟರ್ ನಲ್ಲಿ ನಮಗೆ ಲ್ಯಾಪ್ ಟಾಪ್ ನೀಡಲಾಗಿಲ್ಲ. 316 ವಿದ್ಯಾರ್ಥಿಗಳಿದ್ದು, ಈ ಬಗ್ಗೆ ಕುಲಸಚಿವರನ್ನು ಕೇಳಿದರೆ ಎಸ್ ಸಿಪಿ ಹಾಗೂ ಟಿಎಸ್ ಪಿ ಅನುದಾನ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಅವರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದರು.
ಪ್ರಾಜಕ್ಟ್ ಮಾಡಲು ನಮಗೆ ಲ್ಯಾಪ್ ಟಾಪ್ ಅಗತ್ಯವಿದ್ದು, ತಕ್ಷಣ ನ್ಯಾಯ ಒದಗಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ, ತಕ್ಷಣ ಸಮಸ್ಯೆ ಬಗೆಹರಿಸಿ ಲ್ಯಾಪ್ ಟಾಪ್ ಕೊಡಿಸುವುದಾಗಿ ಭರವಸೆ ನೀಡಿದರು.
ರಾಣಿ ಚೆನ್ನಮ್ಮ ವಿವಿ ಕಟ್ಟಡಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿಪೂಜೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ