ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ ತಡೆಗಟ್ಟಲು ಬೆಳಗಾವಿಯಲ್ಲಿ ನಡೆಸಲಾಗಿದ್ದ ಹೋಮ-ಹವನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಮೇ 24ರಂದು ಬಸವಣಗಲ್ಲಿಯಲ್ಲಿ ಹೋಮ ಮಾಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆ ಕಿರಿಯ ಆರೋಗ್ಯ ನಿರೀಕ್ಷಕರ ದೂರಿನ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಹಾಪುರದ ಬಸವಣಗಲ್ಲಿಯ ಸುನೀಲ್ ಮುತಗೇಕರ್, ಕಲ್ಲಪ್ಪ ಶಹಾಪುರಕರ್, ಜಯಂತ ಜಾಧವ್, ಗಿರೀಶ್ ದೋಂಗಡಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ನಟೋರಿಯಸ್ ರೌಡಿ ಗ್ಯಾಂಗ್ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ