Kannada NewsLatest

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂದಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಬೆಳಗ್ಗೆ ಸಭೆ ನಡೆಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ, ಅಧಿವೇಶನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ, ಅವಕಾಶವಿಲ್ಲದಂತೆ, ಸುಲಲಿತವಾಗಿ ನಡೆಯಲು, ತೆಗೆದುಕೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ, ಸಚಿವರು ಪರಿಚಯ ಪಡೆದುಕೊಂಡರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಒಳಾಡಳಿತ, ರಜನೀಶ್ ಗೋಯಲ್, ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ, ಪ್ರತಾಪ್ ರೆಡ್ಡಿ, ಸತೀಶ್ ಕುಮಾರ್, ಐಜಿ ಬೆಳಗಾವಿ ವೃತ್ತ ಹಾಗೂ ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜ್ ಅವರೂ ಉಪಸ್ಥಿತರಿದ್ದರು.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ: ಮಸಿ ಬಳಿದ ಕನ್ನಡ ಕಾರ್ಯಕರ್ತರು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button