
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶ್ರೀನಗರ ಡಬಲ್ ರಸ್ತೆಯಲ್ಲಿರುವ ಸಾಯಿಮಂದಿರದ ಎದುರಿನ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಘನ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ ಶಾಸಜ ಅನಿಲ್ ಬೆನಕೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲೆಯ ಎಲ್ಲ ಸಂಸದರು, ರಾಜ್ಯಸಭೆ ಸದಸ್ಯರು, ಶಾಸಕರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
ಅಮೃತ ಯೋಜನೆ-ಉದ್ಯಾನ ಉದ್ಘಾಟನೆ:
ಮಹಾನಗರ ಪಾಲಿಕೆಯ ವತಿಯಿಂದ ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿರುವ ಬಾಕ್ಸೈಟ್ ರಸ್ತೆಯ ಹನುಮಾನ ನಗರ(ಕುಮಾರ ಸ್ವಾಮಿ ಲೇಔಟ್ ಎದುರಿಗೆ)ದಲ್ಲಿರುವ ಉದ್ಯಾನವನ್ನು ಮಂಗಳವಾರ(ನ.17) ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಉದ್ಘಾಟಿಸಲಿದ್ದಾರೆ.
ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಉದ್ಯಾನವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ.
ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಉದ್ಘಾಟನೆ ಬಳಿಕ ಉದ್ಯಾನವನ್ನು ಸಚಿವರು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ