Belagavi NewsBelgaum News

*ಬೆಳಗಾವಿ: ವರುಣಾರ್ಭಟಕ್ಕೆ ಮತ್ತೊಂದು ಮನೆ ಕುಸಿತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. ಜಿಲ್ಲೆಯ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಿರಂತರ ಮಳೆಯಿಂದಾಗಿ ಬೆಳಗಾವಿಯಲ್ಲಿ ಮತ್ತೊಂದು ಮನೆ ಗೋಡೆ ಕುಸಿದುಬಿದ್ದಿದೆ. ತಾಲೂಕಿನ ಸುಳೇಬಾವಿ ಗ್ರಾಮದ ಕಮ್ಮರಗಲ್ಲಿಯಲ್ಲಿ ಈ ಘಟನೆ ನಡೆದಿದೆ.

ದ್ಯಾಮಪ್ಪ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಒಂದು ಭಾಗ ಸಂಪೂರ್ಣ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button