Kannada NewsLatest

ಸವದತ್ತಿ: ಮನೆ ಗೋಡೆ ಕುಸಿದು ಮಹಿಳೆ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದುಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ.

55 ವರ್ಷದ ಮಹಿಳೆ ಗಂಗವ್ವ ರಾಮಣ್ಣ ಮೂಲಿಮನಿ ಮೃತರು. ನಿರಂತರ ಮಳೆಯಿಂದಾಗಿ ಮನೆ ಗೋಡೆ ನೆನೆದು ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಕುಸಿದು ಬಿದ್ದಿದೆ. ಮನೆಯಲ್ಲಿ ಮಲಗಿದ್ದ ಮಹಿಳೆ ಗಂಗವ್ವ ಮೇಲೆ ಗೋಡೆ ಕುಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಕೊನೆಯುಸಿರೆಳೆದಿದ್ದಾರೆ.

ಎಸಿಬಿಯಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಅತಂತ್ರ ಸ್ಥಿತಿ

https://pragati.taskdun.com/latest/acblokaayuktafile-transferadggp-order/

Related Articles

Back to top button