ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಜನಸಂದಣಿಯಿರುವ ಸ್ಥಳಗಳಲ್ಲಿ ಜನರನ್ನು ನಿಯಂತ್ರಿಸಲು ಮುಂದಾಗಿರುವ ಸರ್ಕಾರ ಹಲವೆಡೆ ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ ಮಾಡಿದೆ.
ಜನಸಂದಣಿಯಿರುವ ರೈಲ್ವೆ ನಿಲ್ದಾಣಗಳಾದ ಬೆಳಗಾವಿ, ಹುಬ್ಬಳ್ಳಿ, ಬಳ್ಳಾರಿ ರೈಲ್ವೆ ಪ್ಲಾಟ್ಫಾರ್ಮ್ಗಳ ದರವನ್ನು 50 ರೂ.ಗೆ. ಏರಿಕೆ ಮಾಡಲಾಗಿದೆ. ಈಗಾಗಲೇ ದೇಶದಲ್ಲಿ 168 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉಳಿದ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ರೈಲ್ವೆ ಇಲಾಖೆ ದರ ಹೆಚ್ಚಳಕ್ಕೆ ಮುಂದಾಗಿದೆ.
ದೇಶದಲ್ಲಿ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆ, ಭಾರತೀಯ ರೈಲ್ವೆ ಇಲಾಖೆಯು ಒಟ್ಟು 168 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ. ಪಶ್ಚಿಮ ಮಧ್ಯ ರೈಲ್ವೆ ಮತ್ತು ಉತ್ತರ ರೈಲ್ವೆಯಿಂದ ತಲಾ 11 ರೈಲುಗಳು, ದಕ್ಷಿಣ ಮಧ್ಯ ರೈಲ್ವೆ ಮತ್ತು ಈಶಾನ್ಯ ಗಡಿನಾಡಿನ ರೈಲ್ವೆಯಿಂದ ತಲಾ 20, ದಕ್ಷಿಣ ರೈಲ್ವೆಯಿಂದ 32, ಪೂರ್ವ ಮಧ್ಯ ರೈಲ್ವೆಯಿಂದ ಐದು ರೈಲುಗಳ ಸಂಚಾರ ಮಾರ್ಚ್ 20ರಿಂದ ಮಾರ್ಚ್ 31ರವರೆಗೆ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ