Kannada NewsLatest

ಬೆಳಗಾವಿ ಹುಕ್ಕೇರಿ ಹಿರೇಮಠಕ್ಕೆ ಸಚಿವ ಶ್ರೀಮಂತ ಪಾಟೀಲ ಭೇಟಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಹುಕ್ಕೇರಿ ಹಿರೇಮಠಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಚಿವ ಶ್ರೀಮಂತ ಬಾಳಾಸಾಹೇಬ್ ಪಾಟೀಲ್ ಭೇಟಿ ನೀಡಿ  ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಬೆಳಗಾವಿ ಹುಕ್ಕೇರಿ ಹಿರೇಮಠ ಸರ್ವಧರ್ಮೀಯರೂ ಕೂಡ ಗುರು ಸ್ಥಾನದಲ್ಲಿದೆ. ಈ ಮಠದ ಬಗ್ಗೆ ಇಡೀ ರಾಜ್ಯದಲ್ಲಿ ಒಳ್ಳೆಯ ಹೆಸರಿದೆ. ಇದು ನಮ್ಮ ಜಿಲ್ಲೆಯಲ್ಲಿರುವುದು ಅಭಿಮಾನದ ಸಂಗತಿ ಎಂದರು.

ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ್ ಪಾಟೀಲ ಹಾಗೂ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಮುಕ್ತಾರ್ ಹುಸೇನ್ ಪಟಾನ್, ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರಾದ ಮೆಬೂಬಸಾಬ, ಅಧಿಕಾರಿಗಳಾದ ವಿಜಯಕುಮಾರ್ ತೋರಗಲ್ ಮತ್ತು ಬೆಳಗಾವಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ, ಓ ಎಸ್ ಡಿ ರಾಜಕುಮಾರ್, ಪ್ರಥಮ ದರ್ಜೆ ಗುತ್ತಿಗೆದಾರ ನಾನ ಗೌಡ ಪಾಟೀಲ್, ಶಿವಯೋಗಿ ಶಾಲೆಯ ಅಧ್ಯಕ್ಷ ಅಶೋಕ್ ಧರಿಗೌಡರ, ಎಸ್ ಪಿರ್ಜಾದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button