ಅಖಂಡ ಕರ್ನಾಟಕದ ಅಭಿವೃದ್ಧಿ ನಿಟ್ಟಿನಲ್ಲಿ ಅಧಿವೇಶನದಲ್ಲಿ ಚರ್ಚೆ ನಡೆಯಲಿ; ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಲಹೆ
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆಸುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸರಕಾರ ಹಾಗೂ ವಿಪಕ್ಷಗಳು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಜತೆ ಜತೆಗೆ ಅಖಂಡ ಕರ್ನಾಟಕದ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಧಿವೇಶನದ ಉಳಿದ ಬಾಕಿ ದಿನಗಳಲ್ಲಿ ಚರ್ಚೆ ನಡೆಸಿ ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂಧಿಸಬೇಕೆಂದು ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ 50ನೇ ಮಾಸಿಕ ಸುವಿಚಾರ ಚಿಂತನೆಯ ಅಂಗವಾಗಿ ಐದು ದಿನದ ಹುಕ್ಕೇರಿ ಹಿರೇಮಠ ಗುರುಕುಲದ ಹಳೆಯ ವಿದ್ಯಾರ್ಥಿಗಳಿಗೆ ಪುನಶ್ಚೇತನ ಶಿಬಿರ ಕಾರ್ಯಕ್ರಮಕ್ಕೆ ಭೇಟಿ ನೀಡಿ ಮಾತನಾಡಿದರು.
ಬಹಳ ವರ್ಷಗಳ ನಂತರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದ 10ದಿನದ ಕಾಲದಲ್ಲಿ ಉತ್ತರ ಕರ್ನಾಟಕದ ಜನರ ಸಮಸ್ಯೆಗೆ ಪರಿಹಾರ ಕೊಡಿಸುವ ಕಾರ್ಯವಾಗಬೇಕು. ಆದರೆ ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರಿಗೆ ಮತ್ತು ಬಸವಣ್ಣನವರಿಗೆ ಅವಮಾನ ಮಾಡಿರುವುದನ್ನು ನೋಡಿದರೆ ಮನಸ್ಸಿಗೆ ಬೇಸರವಾಗಿದೆ ಎಂದರು.
ಬೆಳಗಾವಿಯಲ್ಲಿ ಸುವರ್ಣ ವಿಧಾನ ಸೌಧ ನಿರ್ಮಾಣ ಮಾಡಿದ್ದು, ಅಧಿವೇಶನ ನಡೆಸುವುದು ಈ ಭಾಗದ ಜನರಿಗೆ ನ್ಯಾಯ ಸಿಗಲಿ ಎಂದು ಆದರೆ, 10ದಿನದ ಅವಧಿ ಗದ್ದಲದಲ್ಲಿ ಕಳೆದರೇ ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ. ಇದನ್ನು ಯಾರೂ ಮಾಡಬಾರದು. ಬಾಕಿ ಉಳಿದಿರುವ ದಿನಗಳಲ್ಲಿಯಾದರೂ ಜನರಿಗೆ ಅನಕೂಲವಾಗುವ ರೀತಿಯಲ್ಲಿ ಚರ್ಚೆ ನಡೆಸಿ ಪರಿಹಾರ ಕೊಂಡುಕೊಳ್ಳುವ ನಿರ್ಣಯ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಜತೆ ಜತೆಗೆ ಅಖಂಡ ಕರ್ನಾಟಕದ ಚಿಂತನೆಯನ್ನು ಅಧಿವೇಶನದಲ್ಲಿ ಚರ್ಚೆ ನಡೆಸಿ ಈ ಭಾಗದ ಜನರ ಆಶೋತ್ತರಗಳಿಗೆ ಸ್ಪಂಧಿಸುವ ಕೆಲಸವನ್ನು ಸರಕಾರ ಮತ್ತು ವಿಪಕ್ಷಗಳು ಮಾಡಬೇಕೆಂದು ಜಗದ್ಗುರುಗಳು ತಿಳಿಸಿದರು.
ರಾಜ್ಯದಲ್ಲಿ ಮತಾಂತರ ಕಾಯ್ದೆ ನಿಷೇಧವಾಗುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ. ಮುಖ್ಯಮಂತ್ರಿಗಳಿಗೆ ಈಗಾಗಲೇ ಈ ಭಾಗದ ವಿವಿಧ ಮಠಾಧೀಶರು ಭೇಟಿಯಾಗಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಮನವಿ ನೀಡಿದ್ದು ಸಂತಸ ತಂದಿದೆ ಎಂದರು.
ಹುಕ್ಕೇರಿಯ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಾಮಾಜಿಕ, ಧಾರ್ಮಿಕ ಕಾರ್ಯವನ್ನು ಮಾಡುತ್ತಿರುವುದು ನಿಜಕ್ಕೂ ಅಭಿಮಾನ ಎನ್ನಿಸುತ್ತಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಶ್ರೀಮಠದ ಸಾಕಷ್ಟು ಸಮಾಜಮುಖಿ ಕೆಲಸ ಮಾಡಿದ್ದಾರೆ. ಅಲ್ಲದೆ, ಪ್ರವಾಹದ ಸಂದರ್ಭದಲ್ಲಿಯೂ ಶ್ರೀಮಠ ಜನರ ಸಂಕಷ್ಟಕ್ಕೆ ಮಿಡಿದಿದ್ದು ಹಾಗೂ ಎರಡೂ ಅಂಬುಲೆನ್ಸ್ ನೀಡಿದ್ದು ಅಭಿಮಾನದ ಸಂಗತಿ. ಅಲ್ಲದೆ, ಕವಲೆದುರ್ಗ ಭುವನಗಿರಿ ಸಂಸ್ಥಾನ ಮಠದ ರಾಜಗುರು ಶ್ರೀ. ಮರುಳಸಿದ್ದೇಶ್ವರ ಶಿವಚಾರ್ಯ ಸ್ವಾಮೀಜಿ ಅವರು, ಐದು ದಿನದ ತರಬೇತಿ ನೀಡುತ್ತಿರುವುದು ಸಂತಸದ ತಂದಿದೆ ಎಂದರು.
ಹುಕ್ಕೇರಿ ಹಿರೇಮಠದ ಸುವಿಚಾರ ಚಿಂತನೆಯ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದವರು ನಾವೇ. ಇಂದು 50ನೇ ಸುವಿಚಾರ ಚಿಂತನೆಯ ಕಾರ್ಯಕ್ರಮದಲ್ಲಿ ಸಾಮಾಜಿಕ ಚಿಂತನೆಗಳು ನಡೆಯುತ್ತಿರುವುದು ಅಭಿಮಾನದ ಸಂಗತಿ. ಮಾಸಿಕ ಸುವಿಚಾರ ಚಿಂತನವಷ್ಟೆ ಹುಕ್ಕೇರಿ ಸ್ವಾಮೀಜಿ ಮಾಡಲಿಲ್ಲ. ಇದರ ಜತೆಗೆ ಪ್ಲಾಸ್ಟೀಕ್ ಮುಕ್ತ ಭಾರತದ ಅಭಿಯಾನ ಮತ್ತು ಪೌರಕಾರ್ಮಿಕರಿಗೆ ಸನ್ಮಾನ ಮಾಡಿರುವುದು ಅತೀವ ಸಂತೋಷ ಪಡುತ್ತೇವೆ ಎಂದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕಾಶಿ ಜಗದ್ಗುರುಗಳು ಅನಿರೀಕ್ಷಿತವಾಗಿ ಭೇಟಿ ನೀಡಿ ನಮಗೆ ಆಶೀರ್ವಾದ ಮಾಡುತ್ತಿರುವುದು ಆನೆ ಬಲ ಬಂದ ಹಾಗೆ ಆಗಿದೆ. ಅಧಿವೇಶನದ ಅವಧಿಯಲ್ಲಿ ಜಗದ್ಗುರುಗಳು ಆಶೀರ್ವಾದ ಮಾಡಿದ್ದಾರೆ. ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರು ಈ ಭಾಗದ ಅಭಿವೃದ್ಧಿಗೆ ಧ್ವನಿ ಎತ್ತಿ ಪರಿಹಾರ ಕಂಡುಕೊಳ್ಳಬೇಕೆಂದದರು.
ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ, ಗುರುಕುಲದ ಮುಖ್ಯಸ್ಥ ಸಂಪತಕುಮಾರ ಶಾಸ್ತ್ರಿಗಳು ಸ್ವಾಗತಿಸಿದರು. ಹುಕ್ಕೇರಿ ಹಿರೇಮಠದ ಗುರುಕುಲ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ನಿಶಾಂತ ಸ್ವಾಮಿ ನಿರೂಪಿಸಿದರು.
ಬೆಳೆಹಾನಿ ಪರಿಹಾರ ಧನ ಹೆಚ್ಚಳ; ಖಾಸಗಿ ಶಾಲೆಗಳ ಸರ್ಕಾರಿ ವೇತನಾನುದಾನಕ್ಕೂ ಕ್ರಮ; ಸಿಎಂ ಬೊಮ್ಮಾಯಿ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ