Kannada NewsLatest

ಆತ್ಮಹತ್ಯೆಗೆ ಯತ್ನಿಸಿ ರೈಲಿಗೆ ತಲೆಕೊಟ್ಟ ಬೆಳಗಾವಿ ದಂಪತಿ; ಪತಿ ಸಾವು, ಪತ್ನಿ ಗಂಭೀರ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದರೆ ಪತ್ನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ.

ಮಾಧ್ಯಮ ಕ್ಷೇತ್ರದ ಮುದ್ರಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬೆಳಗಾವಿಯ ಹಿಂಡಲಗಾ ತಾಲೂಕಿನ ರಾಕೇಶ್ ಪಾಟೀಲ್ ಮೃತ ದುರ್ದೈವಿ. ಕೌಟುಂಬಿಕ ಕಲಹದಿಂದ ಬೇಸತ್ತು ಪತಿ-ಪತ್ನಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ನಗರದ ಎರಡನೇ ರೈಲ್ವೆ ಗೇಟ್ ಬಳಿ ಗೂಡ್ಸ್ ರೈಲಿಗೆ ದಂಪತಿ ಇಬ್ಬರೂ ತಲೆಕೊಟ್ಟಿದ್ದಾರೆ. ಘಟನೆಯಲ್ಲಿ ಪತಿ ರಾಕೇಶ್ ಪಾಟೀಲ್ ಮೃತಪಟ್ಟಿದ್ದಾರೆ. ಪತ್ನಿ ಅಸ್ಮಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button