
ಪ್ರಗತಿವಾಹಿನಿ ಸುದ್ದಿ: ಕುಡುಕ ಪತಿ ಮಹಾಶಯನೊಬ್ಬ ಪತ್ನಿಗೆ ಹಿಂದಿನಿಂದ ಬಂದು ಚಾಕುವಿನಿಂದ ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಉದ್ದವ್ವ ಪತಿಯಿಂದ ಹಲ್ಲೆಗೊಳಗಾದ ಪತ್ನಿ. ಗಂಭೀರವಾಗಿ ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಕುಡುಕ ಗಂಡನ ಕಾಟಕ್ಕೆ ಬೇಸತ್ತ ಪತ್ನಿ ತವರು ಮನೆಗೆ ತೆರಳಿದ್ದಳು. ತವರು ಮನೆಯವರೊಂದಿಗೆ ಸಂತೆಗೆಂದು ಗಾಡಿಯಲ್ಲಿ ಪಾಶ್ಚಾಪುರಕ್ಕೆ ಬಂದಿದ್ದ ವೇಳೆ ಮತ್ತೊಂದು ವಾಹನದಲ್ಲಿ ಬಂದ ಪತಿ ಹಾಲಪ್ಪ, ಪತ್ನಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಲ್ಲದೇ ಪತ್ನಿಗೆ ಹಿಂದಿನಿಂದ ಬಂದು ಚಾಕು ಇರಿದು ಎಸ್ಕೇಪ್ ಆಗಿದ್ದಾನೆ.
ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಪತಿ ಹಾಲಪ್ಪ ಕುಡಿತದ ದಾಸನಾಗಿದ್ದ ಹಾಲಪ್ಪ, ಪತ್ನಿ ಹೊಡೆಯುವುದು, ಕಿರಿಕುಳನೀಡುವುದು ಮಾಡುತ್ತಲೇ ಇದ್ದನಂತೆ. ಇದರಿಂದ ನೊಂದ ಪತ್ನಿ ತವರು ಸೇರಿದ್ದರೂ ಅಲ್ಲಿಗೆ ಬಂದು ಜಗಳವಾಡುತ್ತಿದ್ದನಂತೆ. ಇದೀಗ ಪತ್ನಿಗೆ ಚಾಕು ಇರಿದು ಪರಾರಿಯಾಗಿದ್ದು, ಪತ್ನಿ ಸ್ಥಿತಿ ಗಂಭೀರವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ