Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತಿಯಿಂದಲೇ ಪತ್ನಿಗೆ ಬ್ಲ್ಯಾಕ್ ಮೇಲ್; ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಚ್ಛೇದನಕ್ಕಾಗಿ ಪತಿ ಮಹಾಶಯನೊಬ್ಬ ಎಂತಹ ನೀಚ ಐಡಿಯಾವನ್ನು ಮಾಡಿದ್ದಾನೆ ನೋಡಿ. ಪತಿಯ ಖಾಸಗಿ ವಿಡಿಯೋ, ಫೋಟೋಗಳನ್ನು ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪತಿ ಮಹಾಶಯನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಕಿರಣ್ ಬಂಧಿತ ಆರೋಪಿ. ಬೆಳಗಾವಿ ನಗರ ನಿವಾಸಿ. ತಾನು ಮತ್ತೊಂದು ಮದುವೆಯಾಗಲು ಡಿವೋರ್ಸ್ ಪಡೆಯಲೆಂದು ಪತ್ನಿಯ ಖಾಸಗಿ ವಿಡಿಯೋ, ಫೋಟೋಗಳನ್ನು ವೈರಲ್ ಮಾಡುವುದಾಗಿ ಪದೇ ಪದೇ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿದ್ದ.

ಪತಿಯ ಹಿಂಸೆಯಿಂದ ನೊಂದ ಮಹಿಳೆ ಆತನನ್ನು ಮನವೊಲಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದಾಳೆ. ಆದಾಗ್ಯೂ ಒಪ್ಪದ ಪತಿ ಕೋರ್ಟ್ ಮೆಟ್ಟಿಲೇರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಆದರೂ ಪತ್ನಿ ವಿಚ್ಛೇಧನಕ್ಕೆ ಒಪ್ಪದಿದ್ದಾಗ ಬ್ಲ್ಯಾಕ್ ಮೇಲ್ ಮಾಡಿದ್ದಾನೆ.

ಬೇರೆ ದಾರಿಕಾಣದೆ ಪತ್ನಿ ಬೆಳಗಾವಿ ನಗರ ಸೈಬರ್ ಠಾಣೆಯಲ್ಲಿ ಪತಿ ವಿರುದ್ಧ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬಗ್ಗೆ ದೂರು ನೀಡಿದ್ದಾಳೆ. ಆರೋಪಿ ಪತಿ ಕಿರಣ್ ನನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಿಸಿದ್ದಾರೆ. ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದ್ದಾರೆ. ಈ ವೇಳೆ ಖತರ್ನಾಕ್ ಪತಿ ಮಾಡುತ್ತಿದ್ದ ಬ್ಲ್ಯಾಕ್ ಮೇಲ್ ಸಾಬೀತಾಗಿದೆ.

Home add -Advt

ತನ್ನನ್ನು ಪೊಲೀಸರು ಅರೆಸ್ಟ್ ಮಾಡುತ್ತಾರೆ ಎಂಬುದು ತಿಳಿಯುತ್ತಿದ್ದಂತೆ ಕಿರಣ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ರಕ್ಷಿಸಿದ ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇದೀಗ ಆರೋಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಪೊಲೀಸರು ಕಿರಣ್ ನನ್ನು ಬಂಧಿಸಿದ್ದಾರೆ.


Related Articles

Back to top button