ಪ್ರಗತಿವಾಹಿನಿ ಸುದ್ದಿ: ಅನಗೋಳದಲ್ಲಿ ಛತ್ರಪತಿ ಸಂಬಾಜಿ ಮಹಾರಾಜ ಪ್ರತಿಮೆ ಅನಾವರಣ ವೇಳೆ ಜಿಲ್ಲಡಳಿತದ ಆದೆಶ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಹಾಗೂ ಬೆಳಗಾವಿಯಲ್ಲಿ ಜೈ ಮಹಾರಾಷ್ಟ್ರ ಘೋಷಣೆ ಕೂಗಿದ ವಿಚಾರವಾಗಿ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ವಿರುದ್ಧ ದೂರು ದಾಖಲಾಗಿದೆ.
ಬೆಳಗಾವಿ ನೆಲದಲ್ಲಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಲಾಗಿದೆ. ಇದು ನಾಡದ್ರೋಹ ಕೆಲಸ ಎಂದು ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ವಿರುದ್ಧ ಕಿತ್ತೂರು ಕರ್ನಾಟಕ ಸೇನೆ ಅಧ್ಯಕ್ಷ ಮಹದೇವ ತಳವಾರ ದೂರು ನೀಡಿದ್ದಾರೆ.
ಬೆಳಗಾವಿ ಮೇಯರ್ ಸವಿತಾ ಕಾಂಬಳೆ, ಉಪ ಮೇಯರ್ ವಿರುದ್ಧ ಬೆಳಗಾವಿ ನಗರ ಟಿಳಕವಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪಾಲಿಕೆಯಿಂದ 45 ಲಕ್ಷ ಅನುದಾನದಲ್ಲಿ ಮೂರ್ತಿ ನಿರ್ಮಾಣ ಮಾಡಲಾಗಿದೆ. ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದರೂ ಶಾಸಕ ಅಭಯ್ ಪಾಟೀಲ್ ಅನಧಿಕೃತವಾಗಿ ಪ್ರತಿಮೆ ಲೋಕಾರ್ಪಣೆ ಮಾಡಿದ್ದಾರೆ. ಮೂರ್ತಿ ಲೋಕಾರ್ಪಣೆ ವೇಳೆ ಜೈ ಮಹಾರಾಷ್ಟ್ರ ಎಂದು ಮಹಾರಾಷ್ಟ್ರ ಸಚಿವ ಶಿವೇಂದ್ರ ರಾಜೆ ಬೋಸಲೆ ಘೋಷಣೆ ಕೂಗಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು, ಮೇಯರ್, ಉಪ ಮೇಯರ್ ಚಪ್ಪಾಳೆ ತಟ್ಟಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಆಪಮಾನ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಹದೇವ ತಳವಾರ್ ದೂರು ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ