Belagavi NewsBelgaum NewsKannada NewsKarnataka NewsLatestUncategorized

*BREAKING: ಜಲಪಾತದ ಬಳಿ ಅಧಿಕಾರಿಗಳಿಂದ ಮೋಜು: ಉಳಿದ ನಾಲ್ವರು ಸಿಬ್ಬಂದಿಗಳ ವಿರುದ್ಧ ದೂರು ದಾಖಲಿಸಲು ಡಿಸಿ ನಿರ್ದೇಶನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಿರ್ಬಂಧನೆಯನ್ನು ಉಲ್ಲಂಘಿಸಿ ಬಟವಡೆ ಫಾಲ್ಸ್ ಬಳಿ ಅರಣ್ಯ ಪ್ರದೇಶದಲ್ಲಿ ಮೋಜು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಜನರ ವಿರುದ್ಧ ದೂರು ದಾಖಲಿಸಲಾಗಿದ್ದು, ಇನ್ನುಳಿದ ನಾಲ್ವರ ವಿರುದ್ಧವೂ ಕೇಸ್ದಾಖಲಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ನಿರ್ಬಂಧವಿದ್ದರೂ ಬಟವಡೆ ಫಾಲ್ಸ್ ಬಳಿ ಅರಣ್ಯ ಪ್ರದೇಶದಲ್ಲಿ ಅಧಿಕಾರಿ, ವೈದ್ಯರ ತಂಡವೇ ಎಣ್ಣೆ ಪಾರ್ಟಿ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿರುವ ಪ್ರಕರನಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರ ವಿರುದ್ಧ ಜಾಂಬೋಟಿ ಅರಣ್ಯ ವಲಯದಲ್ಲಿ ಕೇಸ್ ದಾಖಲಾಗಿದೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎನ್ನಲಾದ ಉಳಿದ ನಾಲ್ವರು ಹೆಸ್ಕಾಂ ಸಿಬ್ಬಂದಿ ವಿರುದ್ಧವೂ ದೂರು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನವನ್ನು ನೀಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button