Belagavi NewsBelgaum NewsKannada NewsKarnataka NewsLatest

*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್*


ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜ.೧೭, ೨೦೨೪ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮದ್ಯಾಹ್ನ ೧ ಗಂಟೆಯವರೆಗೆ, SSLC, PUC,  Any Degree,  Diploma & BE Mechanical ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಉದ್ಯೋಗ ಮೇಳವನ್ನು ಭರತೇಶ ಎಜುಕೇಷನ್ ಟ್ರಸ್ಟ್, JGND, ಭರತೇಶ ಕಾಲೇಜ್ ಆಫ್ ಕಾಮರ್ಸ, ಬೆಳಗಾವಿ. ಇಲ್ಲಿ ಆಯೋಜಿಸಲಾಗಿದೆ.


ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.


ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊ. ಸಂಖ್ಯೆ: ೭೯೭೫೮೫೬೫೬೬, ೮೭೨೨೭೩೯೬೩೫ ಇವರಿಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button