*ಬೆಳಗಾವಿ: ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್, ಎಂ.ಕೆ.ಹೆಗಡೆ ಮತ್ತಿತರರಿಗೆ ಪತ್ರಕರ್ತರಿಂದ ಅಭಿಮಾನದ ಅಭಿನಂದನೆ*


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ರವರನ್ನು ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರೀಶ್ ಕೋಟೆ, ಕೆ ಪಿ ಪುಟ್ಟಸ್ವಾಮಯ್ಯ, ಕೆ ಎಸ್ ನಾಗರಾಜ್, ದೀಪಕ ಕರಾಡೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ಮಾಧ್ಯಮ ಸಲಹೆಗಾರರಾದ ಎಂ ಕೆ ಹೆಗಡೆಯವರನ್ನು, ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಈಗ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ, ಬೆಳಗಾವಿ ಪತ್ರಕರ್ತರಿಂದ ಅಭಿಮಾನದ ಅಭಿನಂದನೆ ಜರುಗಲಿದೆ.
ಕರ್ನಾಟಕ ಕಾರ್ನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲೆಯ ಘಟಕ ಮತ್ತು ವಿವಿಧ ಪತ್ರಿಕಾ ಸಂಘಗಳಿಂದ ಬೆಳಗಾವಿ ನಗರದಲ್ಲಿ ಶನಿವಾರ ದಿನಾಂಕ 11-11-2023ರಂದು ನೆಹರು ನಗರದಲ್ಲಿರುವ ಕನ್ನಡ ಭವನದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಜಗದ್ಗುರುಗಳಾದ ಡಾ|| ತೋಂಟದ ಸಿದ್ದರಾಮ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ಪತ್ರಿಕಾ ವಿತರಕರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೈಕಲ್ ವಿತರಣೆ ಮಾಡಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಡಾ.ಭೀಮಶಿ ಜಾರಕಿಹೋಳಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಆಸೀಫ್ (ರಾಜು) ಶೇಠ, ಅಭಯ ಪಾಟೀಲ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಅತಿಥಿಗಳಾಗಿ ಬಿ ಸಿ ಲೋಕೇಶ್, ಎಚ್.ಬಿ.ಮದನಗೌಡ, ಪುಂಡಲೀಕ ಬಾಳೋಜಿ, ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೋಲಿಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ, ವಾರ್ತಾ ಇಲಾಖೆಯ ಉಪನಿರ್ದೇಶಕ ಗುರುನಾಥ್ ಕಡಬೂರು, ಶುಭಾ ರತ್ನಾಯಕ, ಬೆಳಗಾವಿ ಜಿಲ್ಲಾಧ್ಯಕ್ಷ ದಿಲೀಪಕುಮಾರ್ ಕುರುಂದವಾಡೆ ಹಾಗೂ ಹಲವಾರು ಸಂಘ ಸಂಸ್ಥೆಗಳು ಮತ್ತು ಜಿಲ್ಲೆಯ ಪತ್ರಕರ್ತ ಮಿತ್ರರು ಭಾಗವಹಿಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ