Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ನ.30 ರಂದು ಕನಕದಾಸ ಜಯಂತ್ಯೋತ್ಸವ ಆಚರಣೆ*

ಕನಕದಾಸ ವೃತ್ತದಿಂದ ಕುಮಾರ ಗಂಧರ್ವ ಕಲಾಮಂದಿರದವರೆಗೆ ಭಾವಚಿತ್ರದ ಮೆರವಣಿಗೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕದಾಸ ಜಯಂತ್ಯೋತ್ಸವವನ್ನು ನವೆಂಬರ್ 30, 2023 ರಂದು ಆಚರಿಸಲಾಗುತ್ತಿದೆ.


ಬೆಳಿಗ್ಗೆ 11 ಗಂಟೆಗೆ ಕನಕದಾಸ ವೃತ್ತದಿಂದ ಕುಮಾರ ಗಂಧರ್ವ ಕಲಾಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ವೇದಿಕೆ ಕಾರ್ಯಕ್ರಮ ಜರುಗಲಿದೆ.


ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಲ. ಜಾರಕಿಹೊಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.


ಶಾಸಕರಾದ ಆಸೀಫ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಮ. ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ-2 ನವದೆಹಲಿ ಪ್ರಕಾಶ್ ಬಾ. ಹುಕ್ಕೇರಿ ವಿಶೇಷ ಆಮಂತ್ರಿತರಾಗಿದ್ದಾರೆ.


ಆರ್.ಪಿ.ಡಿ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ. ಎಚ್. ಬಿ. ಕೋಲಕಾರ ಅವರು ಉಪನ್ಯಾಸ ನೀಡಲಿದ್ದಾರೆ ಹಾಗೂ ಸೀಮಾ ಕುಲಕರ್ಣಿ ಹಾಗೂ ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.


ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಸಂಜಯ್ ಬಿ. ಶಟ್ಟೆಣ್ಣವರ್, ಪೊಲೀಸ್ ಮಹಾನಿರೀಕ್ಷಕರಾದ ವಿಕಾಶ್ ಕುಮಾರ್ ವಿಕಾಶ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಪಾಟೀಲ, ಪೊಲೀಸ್ ಆಯುಕ್ತರಾದ ಎಸ್.ಎನ್. ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಭೀಮಾಶಂಕರ್ ಎಸ್. ಗುಳೇದ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹರ್ಷಲ್ ಭೋಯರ್, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಸಮಾಜದ ಮುಖಂಡರು ಹಾಗೂ ಮತ್ತಿತರ ಗಣ್ಯರು ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button