
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ; ಕನ್ನಡಪರ ಹೋರಾಟಗಾರನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ.
ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪಿಸಿದ್ದಕ್ಕಾಗಿ ಕನ್ನಡ ಪರ ಹೋರಾಟಗಾರ ಶ್ರೀನಿವಾಸ ತಾಳೂಕರ್ ಎಂಬುವವರ ಜನರಲ್ ಸ್ಟೋರ್ , ಎಸ್ ಟಿಡಿ ಬೂತ್ ಗೆ ಕಿಡಿಗೆಡಿಗಳು ತಡರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಅಂಗಡಿ ಪಕ್ಕವೇ ಮನೆ ಇದ್ದಿದ್ದರಿಂದ ಅಂಗಡಿಗೆ ಬೆಂಕಿ ಹಚ್ಚಿದ್ದನ್ನು ಗಮನಿಸಿದ ಕುಟುಂಬಸ್ಥರು ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ