Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಹೊಸ ವರ್ಷಾಚರಣೆ ದಿನವೇ ಕಿಡಿಗೇಡಿಗಳ ದುಷ್ಕೃತ್ಯ; ಕನ್ನಡ ಧ್ವಜಕ್ಕೆ ಬೆಂಕಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೊಸವರ್ಷದ ಸಂಭ್ರಮದ ವೇಳೆಯೇ ಬೆಳಗವೈಯಲ್ಲಿ ಪುಂಡರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಬೆಳಗಾವಿಯ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದರ್ಪ ಮೆರೆದಿದ್ದಾರೆ. ಪುಂಡರ ಕೃತ್ಯಕ್ಕೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

Home add -Advt

ತಡ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ತಪ್ಪಿತಸ್ಥರನ್ನು ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related Articles

Back to top button