ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕ್ಯಾತೆ ವಿರುದ್ಧ ಕನ್ನಡಪರ ಸಂಘಟನೆ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಧರಣಿ ನಡೆಸಿರುವ ಕನ್ನಡಪರ ಸಂಘಟನೆ ಕಾರ್ಯಕರ್ತರು ಉದ್ಧವ್ ಠಾಕ್ರೆ ಅವರ ಭಾವಚಿತ್ರಕ್ಕೆ ಚಪ್ಪಲಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಉದ್ಧವ್ ಠಾಕ್ರೆ ಅವರ ಪ್ರತಿಕೃತಿ ದಹನ ಮಾಡಿ ಮಹಾರಾಷ್ತ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲವೆಂದು ಹೋರಾಟಗಾರರು ಹೇಳಿದ್ದಾರೆ.
ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ ಕೂಡ ಪ್ರತಿಭಟನೆ ಹಮ್ಮಿಕೊಂಡಿದೆ.
ಬೆಳಗಾವಿ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಮಹಾ ಸಿಎಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ