
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಆಟವಾಡುತ್ತಿದ್ದ ಬಾಲಕ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಕಪಿಲೇಶ್ವರ ಮಂದಿರದ ಬಳಿ ನಡೆದಿದೆ.
ಮೃತ ಬಾಲಕನನ್ನು 7 ವರ್ಷದ ಸ್ವರಾಜ್ ಎಂದು ಗುರುತಿಸಲಾಗಿದೆ. ಶನಿವಾರ ಸ್ನೇಹಿತರ ಜೊತೆ ಕಪಿಲೇಶ್ವರ ಮಂದಿರಕ್ಕೆ ತೆರಳಿದ್ದ ಬಾಲಕ ಮರಳಿ ಮನೆಗೆ ವಾಪಸ್ ಆಗಿಲ್ಲ. ಇದರಿಂದ ಗಾಬರಿಯಾದ ಪೋಷಕರು ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಪಿಲೇಶ್ವರ ಮಂದಿರದ ಬಳಿ ಬಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಆದರೂ ಬಾಲಕನ ಸುಳಿವಿಲ್ಲ. ಆದರೆ ಇಂದು ಬೆಳಿಗ್ಗೆ ಬಾಲಕನ ಮೃತದೇಹ ಮಂದಿರದ ಕಲ್ಯಾಣಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ