Belagavi NewsBelgaum NewsKannada NewsKarnataka NewsNational

*ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಳಗಾವಿ ಸಮೀತಿ ವತಿಯಿಂದ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೇರವಣಿಗೆ ಮಾಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು. 

Home add -Advt

ಇಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೇರವಣಿಗೆ ಮಾಡುವ ಮೂಲಕ ಪ್ರತಿಭಟಿಸಲಾಯಿತು. ಈ ವೇಳೆ ರೈತರ ಸಾಲಾ ಮನ್ನಾ ಮಾಡಬೇಕು, ಕಬ್ಬಿನ ಬಾಕಿ ಬಿಲ್ ಪಾವತಿಸಬೇಕು, ಕೃಷಿ ಕಾಯ್ದೆ ಹಿಂಪಡೆಯಬೇಕು, ಕಳಸಾ ಬಂಡೂರಿ ಕಾಮಗಾರಿ ತಕ್ಷಣ ಜಾರಿ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟಿಸಲಾಯಿತು. 

Related Articles

Back to top button