ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೋವಿಡ್ ನಿಯಮಗಳನ್ನು ಪಾಲಿಸದೇ ಪ್ರಯಾಣಿಕರನ್ನು ತುಂಬಿಕೊಂಡು ಬರುತ್ತಿದ್ದ ಕರ್ನಾಟಕದ ಬಸ್ ಗಳನ್ನೂ ವಾಪಸ್ ಮಾಹಾರಾಷ್ಟ್ರಕ್ಕೆ ಕಳುಹಿಸುತ್ತಿರುವ ಘಟನೆ ಬೇಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿಯಿಂದ ಮಹರಾಷ್ಟ್ರಕ್ಕೆ ತೆರಳಿದ್ದ ಬಸ್ ಗಳಲ್ಲಿ ವಾಪಸ್ ಬರುವಾಗ ಕೋವಿಡ್ ನಿಯಮಗಳನ್ನು ಪಾಲಿಸದೇ ಬೇಜವಾಬ್ದಾರಿ ಮೆರೆಯಲಾಗುತ್ತಿರುವುದು ಗಮನಕ್ಕೆ ಬಂದಿದೆ. ಅಂತರ್ ರಾಜ್ಯ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂದು ಸೂಚಿಸಿದ್ದರೂ ಯಾವುದೇ ನಿಯಮ ಪಾಲಿಸಲಾಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಈಗಾಗಲೇ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚುತ್ತಿದ್ದರೂ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕೂಡ ಮಾಡದೇ ಪ್ರಯಾಣಿಕರನ್ನು ಬಿಡಲಾಗುತ್ತಿದೆ.
ಇನ್ನು ಮಾಸ್ಕ್, ದೈಹಿಕ, ಸಾಮಾಜಿಕ ಅಂತರ ಪಾಲನೆ ಮಾಡದೇ ಬಸ್ ಗಳಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಚೆಕ್ ಪೋಸ್ಟ್ ಗಳಲ್ಲೇ ಬಸ್ ಗಳನ್ನು ತಡೆದು ವಾಪಸ್ ಮಹಾರಾಷ್ಟ್ರಕ್ಕೆ ಕಳುಹಿಸಿದ್ದಾರೆ.
ನಾಳೆಯಿಂದ ಅನ್ ಲಾಕ್-4.0 ಜಾರಿ; ಏನಿರುತ್ತೆ, ಏನಿರಲ್ಲ…?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ